ಸಂವಿಧಾನ ಜಾಗೃತಿ ಸಮಾವೇಶ ಯಶಸ್ವಿಗೊಳಿಸಿ: ತಾಪಂ ಇಒ ಗಣೇಶ್‌

| Published : Feb 02 2024, 01:05 AM IST

ಸಂವಿಧಾನ ಜಾಗೃತಿ ಸಮಾವೇಶ ಯಶಸ್ವಿಗೊಳಿಸಿ: ತಾಪಂ ಇಒ ಗಣೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಸಂವಿಧಾನ ಜಾಗೃತಿ ಅಭಿಯಾನದ ಪ್ರಯುಕ್ತ ತಾಲೂಕಿನಾದ್ಯಂತ ಸೈಕಲ್ ಮತ್ತು ಕ್ಯಾಂಡಲ್ ಜಾಥಾ, ಸಂವಿಧಾನದ ಕುರಿತು ಪ್ರಸ್ತಾವನೆ ಮತ್ತು ಪ್ರಸ್ತಾಪ, ಶಾಲಾ ಮಕ್ಕಳಿಂದ ಸಂವಿಧಾನ ಕುರಿತ ಸಾಂಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಅಭಿಯಾನದ ಯಶಸ್ಸಿಗೆ ಶ್ರಮಿಸಲಾಗುವುದು ತಾಪಂ ಇಒ ಗಣೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತರೀಕೆರೆ

ಸಂವಿಧಾನ ಜಾಗೃತಿ ಅಭಿಯಾನದ ಪ್ರಯುಕ್ತ ತಾಲೂಕಿನಾದ್ಯಂತ ಸೈಕಲ್ ಮತ್ತು ಕ್ಯಾಂಡಲ್ ಜಾಥಾ, ಸಂವಿಧಾನದ ಕುರಿತು ಪ್ರಸ್ತಾವನೆ ಮತ್ತು ಪ್ರಸ್ತಾಪ, ಶಾಲಾ ಮಕ್ಕಳಿಂದ ಸಂವಿಧಾನ ಕುರಿತ ಸಾಂಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಅಭಿಯಾನದ ಯಶಸ್ಸಿಗೆ ಶ್ರಮಿಸಲಾಗುವುದು ತಾಪಂ ಇಒ ಗಣೇಶ್ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಅಭಿಯಾನ ಕುರಿತು ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಅಭಿಯಾನ ವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖಾ ಅಧಿಕಾರಿಗಳು, ಸಹಕರಿಸಬೇಕು. ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸಬೇಕಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ, ಪೂರ್ಣಕುಂಭ ಸ್ವಾಗತದೊಂದಿಗೆ ಜಾಥಾ ಬರಮಾಡಿ ಕೊಳ್ಳಲಾಗುವುದು. ಎಲ್ಲಾ ವರ್ಗದ, ಎಲ್ಲಾ ಸಮುದಾಯದ ಜನರು ಸೇರಿ ಸಂವಿಧಾನ ಜಾಗೃತಿ ಅಭಿಯಾನ ನಡೆಸಬೇಕು. ಪಟ್ಟಣದಲ್ಲಿ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಬೇಕು. ಜಾಗೃತಿ ಅಭಿಯಾನ ಯಶಸ್ವಿಗೆ ಹೆಚ್ಚು ಮುತುವರ್ಜಿ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಕಂದಾಯ ಇಲಾಖೆ ಶಿರಸ್ತೇದಾರ್ ನಾಗೇಂದ್ರನಾಯ್ಕ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.1ಕೆಟಿಆರ್.ಕೆ.5ಃ

ತರೀಕೆರೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಅಭಿಯಾನ ಕುರಿತು ಏರ್ಪಡಿಸಿದ್ದ ಸಭೆ ಅಧ್ಯಕ್ಷತೆಯನ್ನು ತಾಪಂ ಇಒ ಗಣೇಶ್ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಕಂದಾಯ ಇಲಾಖೆ ಶಿರಸ್ತೇದಾರ್ ನಾಗೇಂದ್ರನಾಯ್ಕಇದ್ದರು.