ಸಾರಾಂಶ
cylender blast in chitradurga district
ಚಿತ್ರದುರ್ಗ: ತಾಲೂಕಿನ ಬೊಗಳೇರಹಟ್ಟಿಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮೇಲ್ಛಾವಣಿಗೆ ಹಾನಿಯಾದ ಘಟನೆ ಶುಕ್ರವಾರ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಬೊಗಳೇರಹಟ್ಟಿಯ ರಮೇಶ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-----------