ಸಾರಾಂಶ
ಮನೆಯ ಅಡುಗೆ ಸಿಲಿಂಡರ್ ಸ್ಫೋಟಗೊಂಡು 6 ಜನ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಮನೆಯ ಅಡುಗೆ ಸಿಲಿಂಡರ್ ಸ್ಫೋಟಗೊಂಡು 6 ಜನ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮುನೀರ್ ಸಾಬ್ (65), ಫರೀದಾ ಬಾನು (58), ಶಬೀನಾ ಬಾನು (34), ಸುಲ್ತಾನ್ (18), ಅಲ್ತಾಫ್ (15), ತಮನ್ನಾ (14) ಗಾಯಗೊಂಡವರು. ಇವರಲ್ಲಿ ಮುನೀರ್ ಸಾಬ್ ಸ್ಥಿತಿ ಗಂಭೀರವಾಗಿದೆ. ಬೆಳಗ್ಗೆ ಗ್ಯಾಸ್ ಆನ್ ಮಾಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮೇಲ್ಭಾವಣಿಗೆ ಹಾಕಿದ್ದ ಶೀಟ್‌ಗಳು ಹಾರಿಹೋಗಿವೆ. ಅಕ್ಕಪಕ್ಕದ ಮನೆಗಳಿಗೂ ಕೊಂಚ ಹಾನಿಯಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- - - (ಸಾಂದರ್ಭಿಕ ಚಿತ್ರ)