ಕನ್ನಡಪ್ರಭ ವಾರ್ತೆ ಬೇಲೂರುವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ದೇಗುಲದ ದಾಸೋಹಕ್ಕೆ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ತಾಲೂಕು ಆಡಳಿತ ಸ್ಪಂದಿಸಿದ್ದು ಶನಿವಾರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಂದಿನಿಂದ ೨೦ ಸಿಲಿಂಡರ್ ಗಳನ್ನು ತುರ್ತಾಗಿ ದಾಸೋಹ ಭ ಭವನಕ್ಕೆ ಕಳುಹಿಸಲಾಗುತ್ತಿದ್ದು ಇನ್ನು ಮುಂದೆ ಪ್ರಸಾದ ವ್ಯವಸ್ಥೆಗೆ ಯಾವುದೇ ಧಕ್ಕೆ ಬರುವುದಿಲ್ಲ ಎಂದು ಭರವಸೆ ನೀಡಿದರು.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಗುಲ ದಾಸೋಹ ವ್ಯವಸ್ಥೆಯಿಗೂ ಗ್ಯಾಸ್ ಸಿಲಿಂಡರ್ ಕೊರತೆಯ ಬಿಸಿ ತಟ್ಟಿದ ಹಿನ್ನೆಲೆಯಲ್ಲಿ ಈಗ ತಾಲೂಕು ಆಡಳಿತ ಸ್ಪಂದಿಸಿದೆ. ಅಮೆರಿಕ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ದೇಗುಲದಲ್ಲಿ ನಡೆಯುತ್ತಿದ್ದ ದಾಸೋಹ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ತಾಲೂಕು ಆಡಳಿತ ದಾಸೋಹ ಭವನಕ್ಕೆ ಭೇಟಿ ನೀಡಿ ಅಲ್ಲಿಯ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ ನಮಗೆ ಮಾಧ್ಯಮದ ಮೂಲಕ ದಾಸೋಹ ಭವನಕ್ಕೆ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಲ್ಲಿ ಸಿಲಿಂಡರ್ ಇಲ್ಲದೆ ಸಮಸ್ಯೆಯಾಗಿದ್ದು ಗಮನಕ್ಕೆ ಬಂದಿದೆ. ತಾಲೂಕು ಆಡಳಿತದಿಂದ ಶನಿವಾರದಿಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಸಿಲಿಂಡರ್ ವ್ಯವಸ್ಥೆ ಮಾಡಲಾಗಿದೆ. ಇದುವರೆಗೂ ದಾಸೋಹ ವಿತರಣೆಯಲ್ಲಿ ಸಮಸ್ಯೆ ಕಂಡು ಬಂದಿರಲಿಲ್ಲ. ಈಗ ಸಿಲಿಂಡರ್ ಸಮಸ್ಯೆ ಬಂದಿದ್ದು ಅದನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ. ಇನ್ನು ಮುಂದೆ ನಿರಂತರವಾಗಿ ದಾಸೋಹ ನಡೆಯಲಿದೆ. ಜಾತ್ರಾ ಸಮಯ ಹತ್ತಿರ ಇರುವುದರಿಂದ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು. ಇಂದಿನಿಂದ ೨೦ ಸಿಲೆಂಡರ್‌ಗಳನ್ನು ತುರ್ತಾಗಿ ದಾಸೋಹ ಭವನಕ್ಕೆ ಕಳುಹಿಸಲಾಗುವುದು ಎಂದರು.ವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ದಾಸೋಹ ವ್ಯವಸ್ಥೆ ತಾತ್ಕಾಲಿಕವಾಗಿ ನಿಂತಿರುವ ವಿಷಯ ನಮ್ಮ ಗಮನಕ್ಕೆ ಬಂದ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರತಿದಿನ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ದೇವಾಲಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ದಾಸೋಹ ವ್ಯವಸ್ಥೆ ಬಹಳ ಮಹತ್ವದ್ದಾಗಿದೆ. ಭಕ್ತರು ದೂರದೂರಿನಿಂದ ಆಗಮಿಸುವುದರಿಂದ ಅವರಿಗೆ ಆಹಾರ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಇದರಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಇತ್ತೀಚೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದ ದೇವಾಲಯದ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗ್ಯಾಸ್ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಮಾತನಾಡಿ ಅಗತ್ಯವಿರುವ ಸಿಲಿಂಡರ್‌ಗಳನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ದೇವಾಲಯದಲ್ಲಿ ಪ್ರತಿದಿನ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಭಕ್ತರಿಗೆ ದಾಸೋಹ ವ್ಯವಸ್ಥೆ ನಡೆಯುತ್ತಿರುವುದರಿಂದ ಅಗತ್ಯ ಪ್ರಮಾಣದ ಗ್ಯಾಸ್ ಸಿಲಿಂಡರ್‌ಗಳು ನಿರಂತರವಾಗಿ ದೊರೆಯುವಂತೆ ವ್ಯವಸ್ಥೆ ಮಾಡಲಾಗುತ್ತದೆ.ಇದಲ್ಲದೆ ದೇವಾಲಯದ ಅಡುಗೆ ಮನೆಗೆ ಸಂಬಂಧಿಸಿದ ಬಾಯ್ಲರ್ ಹಾಗೂ ಇತರೆ ಸೌಲಭ್ಯಗಳ ದುರಸ್ತಿ ಕಾರ್ಯಗಳ ಕುರಿತು ಸಹ ದೇವಾಲಯದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಲಾಗಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ತಾತ್ಕಾಲಿಕವಾಗಿ ಸೌದೆ ಒಲೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಶನಿವಾರದಿಂದಲೇ ದಾಸೋಹ ವ್ಯವಸ್ಥೆಯನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಉಂಟಾಗದಂತೆ ತಾಲೂಕು ಆಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದೇಗುಲ ಆಡಳಿತಾಧಿಕಾರಿ ಯೋಗೇಶ್, ದಾಸೋಹ ಅಡುಗೆ ನಿರ್ವಾಹಕರಾದ ಸುಬ್ಬಣ್ಣ ಇತರರು ಇದ್ದರು.
ಚನ್ನಕೇಶವನ ದಾಸೋಹ ಭವನಕ್ಕೆ ಪ್ರತಿದಿನ ಸಿಲಿಂಡರ್
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಗುಲ ದಾಸೋಹ ವ್ಯವಸ್ಥೆಯಿಗೂ ಗ್ಯಾಸ್ ಸಿಲಿಂಡರ್ ಕೊರತೆಯ ಬಿಸಿ ತಟ್ಟಿದ ಹಿನ್ನೆಲೆಯಲ್ಲಿ ಈಗ ತಾಲೂಕು ಆಡಳಿತ ಸ್ಪಂದಿಸಿದೆ. ಅಮೆರಿಕ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ದೇಗುಲದಲ್ಲಿ ನಡೆಯುತ್ತಿದ್ದ ದಾಸೋಹ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ತಾಲೂಕು ಆಡಳಿತ ದಾಸೋಹ ಭವನಕ್ಕೆ ಭೇಟಿ ನೀಡಿ ಅಲ್ಲಿಯ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.