ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಕುರಿತು ಸಭೆ ನಡೆಸಿದ ಡೀಸಿ ಶಿಲ್ಪಾನಾಗ್‌

| Published : Jan 11 2024, 01:31 AM IST

ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಕುರಿತು ಸಭೆ ನಡೆಸಿದ ಡೀಸಿ ಶಿಲ್ಪಾನಾಗ್‌
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಚಿಕ್ಕಲ್ಲೂರು ಜಾತ್ರಾ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕಲ್ಲೂರು ಕ್ಷೇತ್ರದಲ್ಲಿ ಜ. ೨೫ ರಿಂದ ನಡೆಯಲಿರುವ ಘನನೀಲ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೊರತೆಯಾಗದಂತೆ ಒದಗಿಸಬೇಕು. ತಾಪಂ, ಗ್ರಾಪಂ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಜಾತ್ರೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ । ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶಿಲ್ಪಾನಾಗ್‌ ಸೂಚನೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಚಿಕ್ಕಲ್ಲೂರು ಜಾತ್ರಾ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕಲ್ಲೂರು ಕ್ಷೇತ್ರದಲ್ಲಿ ಜ. ೨೫ ರಿಂದ ನಡೆಯಲಿರುವ ಘನನೀಲ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೊರತೆಯಾಗದಂತೆ ಒದಗಿಸಬೇಕು. ತಾಪಂ, ಗ್ರಾಪಂ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಹೆಚ್ಚಿನ ಭಕ್ತಾಧಿಗಳು ಜಾತ್ರೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಯಿಂದ ವಿವಿಧ ಕಡೆ ಹೆಚ್ಚು ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜಿಸಬೇಕು. ಕ್ಷೇತ್ರದಲ್ಲಿ ನಿಗದಿತ ಸ್ಥಳದಲ್ಲಿ ಬಸ್ ನಿಲುಗಡೆಗೆ ಸ್ಥಳ ಗೊತ್ತು ಮಾಡಬೇಕು. ಸಂಚಾರ ಮಾರ್ಗಗಳ ಬಗ್ಗೆ ಮೊದಲೇ ಮಾಹಿತಿ ನೀಡಬೇಕು. ಅಗತ್ಯವಿರುವೆಡೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಇತರೆ ವಾಹನಗಳ ಸುಗಮ ಸಂಚಾರಕ್ಕೂ ಅಗತ್ಯ ಕ್ರಮ ವಹಿಸಬೇಕು ಎಂದರು.

ಕ್ಷೇತ್ರ ಸಂಪರ್ಕಿಸುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು. ಗುಣಮಟ್ಟದ ಕೆಲಸ ಆಗಬೇಕು. ಅಧಿಕಾರಿಗಳು ಖುದ್ದು ಸ್ಥಳದಲ್ಲಿದ್ದು ಪರಿಶೀಲಿಸಬೇಕು. ಇತರೆ ಕೆಲಸಗಳಿಗೂ ಆದ್ಯತೆ ನೀಡಿ ಜಾತ್ರೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಜಾತ್ರಾ ಸಮಯದಲ್ಲಿ ಸ್ವಚ್ಛತೆಗೆ ವಿಶೇಷ ಗಮನ ನೀಡಿ, ಪ್ರತಿ ದಿನವು ನೈರ್ಮಲ್ಯ ಕಾಪಾಡಿ. ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ. ವಿಶೇಷವಾಗಿ ಪಂಚಾಯತ್ ಅಧಿಕಾರಿಗಳು ಸುವ್ಯವಸ್ಥಿತವಾಗಿ ಸ್ವಚ್ಚತಾ ಕಾರ್ಯಕ್ಕೆ ಸಕಲ ವ್ಯವಸ್ಥೆಯನ್ನು ಮಾಡಬೇಕು ಎಂದರು. ಹೆಚ್ಚು ಜನರು ಸೇರುವುದರಿಂದ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್‌ಗಳನ್ನು ಧರಿಸುವುದು ಒಳಿತು. ಆರೋಗ್ಯ ಸಂಬಂಧಿ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಇಲಾಖೆ ನೋಡಿಕೊಳ್ಳಬೇಕಿದೆ. ಕ್ಷೇತ್ರದಲ್ಲಿಯೇ ಆರೋಗ್ಯ ಕೇಂದ್ರ ತೆರೆಯಬೇಕು. ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಜಾತ್ರೆ ಆವರಣದಲ್ಲಿ ಯಾವುದೇ ವಿದ್ಯುತ್ ಅವಘಡಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.ಭಕ್ತಾಧಿಗಳಿಗೆ ಚಿಕ್ಕಲ್ಲೂರು ಮಠದ ವತಿಯಿಂದಲೂ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಪೊಲೀಸ್ ಬಂದೋಬಸ್ತ್ ನಿರ್ವಹಣೆಗಾಗಿ ಚೆಕ್‌ಪೋಸ್ಟ್ ಗಳ ಸ್ಥಾಪನೆ, ಬ್ಯಾರಿಕೇಡ್‌ಗಳ ಅಳವಡಿಕೆ ಮಾಡಬೇಕು. ಜಾತ್ರಾ ಸಂಬಂಧ ನೀಡಲಾಗುವ ಸೂಚನೆ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.ಎಸ್ಪಿ ಪದ್ಮಿನಿ ಸಾಹು, ತಹಶೀಲ್ದಾರ್ ಮಂಜುಳ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಶ್ರೀನಿವಾಸ್, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಚಿಕ್ಕಲ್ಲೂರು ಮಠದ ಜ್ಞಾನಾನಂದ ಚನ್ನರಾಜೇ ಅರಸ್, ಬಿ.ಪಿ ಭರತರಾಜೇ ಅರಸ್, ಸನ್ಮತಿ ಅರಸ್, ಸಭೆಯಲ್ಲಿ ಇದ್ದರು.