ಸಾರಾಂಶ
ಡಾ. ನವೀನ್ ಶೆಟ್ಟಿ ಅವರು ಸುಮಾರು 21 ವರ್ಷಗಳ ಕಾಲ ವಿವಿಧ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದು, ಎರಡು ಬಾರಿ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿಗೆ ಪಡೆದುಕೊಂಡಿದ್ದಾರೆ. ಇವರು ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರು.
ಮಂಗಳೂರು: ಪ್ರತಿಷ್ಠಿತ ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಂಗವಾಗಿರುವ ನಂತೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಶೆಟ್ಟಿ ಅವರು ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಇತ್ತೀಚಿಗೆ ನಡೆದ ಪ್ರಾಂಶುಪಾಲರ ಸಂಘದ ಸದಸ್ಯರ ಚುನಾವಣೆಯಲ್ಲಿ ವಿಜೇತರಾಗಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು.
ಇವರು ಸುಮಾರು 21 ವರ್ಷಗಳ ಕಾಲ ವಿವಿಧ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದು, ಎರಡು ಬಾರಿ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿಗೆ ಪಡೆದುಕೊಂಡಿದ್ದಾರೆ. ಇವರು ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರು.ಕಾವೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಮತ ಕಾರ್ಯದರ್ಶಿಯಾಗಿ, ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಎಸ್. ಆದರ್ಶ ಕೋಶಾಧಿಕಾರಿಯಾಗಿ ಆಯ್ಕೆಯಾದರು.
ಪುಂಜಾಲಕಟ್ಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಿನಿ ಆಚಾರ್, ನೂಜಿ ಬಾಳ್ತಿಲದ ಬೆಥನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟಿ. ಎಸ್, ಕಲ್ಲಬೆಟ್ಟುವಿನ ನ್ಯೂ ವೈಬ್ರೆನ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎನ್. ವೆಂಕಟೇಶ್ ನಾಯಕ್ ಉಪಾಧ್ಯಕ್ಷರಾಗಿ, ಕಾಣಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜಯಂತಿ ಕೆ, ಮಂಗಳೂರಿನ ಬದ್ರಿಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸೀಮಾ ಎ.ಕೆ, ಅತ್ತಾವರ ಎಸ್.ಎಂ.ಕುಶೆ ಪದವಿ ಪೂರ್ವ ಕಾಲೇಜಿನ ಬಿಂದುಸಾರ ಶೆಟ್ಟಿ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇತರೆ ಆರು ಮಂದಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.