ಸಾರಾಂಶ
ಕೋಡಿಹಳ್ಳಿಯ ತೋಟದ ಮನೆಯಲ್ಲಿ ವಾಸವಿರುವ ತಮ್ಮ ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿ ರಾಜ್ಯದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದನ್ನು ಹಂಚಿಕೊಂಡು ಅವರ ಆಶೀರ್ವಾದ ಪಡೆದುಕೊಂಡರು.
ಕನಕಪುರ: ತಾಲೂಕಿನ ಕೊಳಗೊಂಡನಹಳ್ಳಿಯ ಕಾಂಗ್ರೆಸ್ ಮುಖಂಡ ಶಂಭುಲಿಂಗಶೆಟ್ಟಿ ನಿಧನರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಡಿಸಿಎಂ ಡಿಕೆಶಿಯವರು ಬೆಂಗಳೂರಿಗೆ ಹಿಂದಿರುಗಿ ಹೋಗುವ ವೇಳೆ ಮಾರ್ಗ ಮಧ್ಯೆ ಕೋಡಿಹಳ್ಳಿಯ ತೋಟದ ಮನೆಯಲ್ಲಿ ವಾಸವಿರುವ ತಮ್ಮ ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿ ರಾಜ್ಯದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದನ್ನು ಹಂಚಿಕೊಂಡು ಅವರ ಆಶೀರ್ವಾದ ಪಡೆದುಕೊಂಡರು.