ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

| Published : Oct 25 2024, 12:56 AM IST

ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ
Share this Article
  • FB
  • TW
  • Linkdin
  • Email

ಸಾರಾಂಶ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಜಯ ಸಾಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ಪ್ರಬುದ್ಧತೆಯನ್ನು ಮೆರೆದ ಕೋಟ ಶ್ರೀನಿವಾಸ ಪೂಜಾರಿ ಅವರ ಉದಾತ್ತ ಪರಂಪರೆಯನ್ನು ಕಿಶೋರ್ ಕುಮಾರ್ ಪುತ್ತೂರು ಅವರು ಮುಂದುವರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸವಿದೆ.ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ನಿಷ್ಠೆ ಮತ್ತು ಕಠಿಣ ಪರಿಶ್ರಮದಿಂದ ಬೆಳೆದು ಬಂದಿರುವ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.