ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ ಡಿ.ಎಸ್.ಸುರೇಶ್

| Published : Dec 21 2024, 01:15 AM IST

ಸಾರಾಂಶ

ತರೀಕೆರೆ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಒತ್ತಾಯಿಸಿದ್ದಾರೆ.

- ಮಾನವ ಸರಪಳಿ, ಟಯರ್ ಸುಟ್ಟು ಆಕ್ರೋಶ

ಕನ್ನಡಪ್ರಭ ವಾರ್ತೆ, ತರೀಕೆರೆ

ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಒತ್ತಾಯಿಸಿದ್ದಾರೆ.

ಬಿಜೆಪಿಯಿಂದ ವಿಧಾನ ಪರಿಷತ್ತು ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಮಹಾತ್ಮಾ ಗಾಂಧಿ ವೃತ್ತದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಸಿ.ಟಿ.ರವಿ ಅವರ ಭಂಧನ ಅಮಾನವೀಯ ಘಟನೆ. ರಾಷ್ಟ್ರೀಯ ನಾಯಕರಿಗೆ ಹೀಗಾದರೆ ಹೇಗೆ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ಮೂಡಾ, ವಾಲ್ಮೀಕಿ ಇತ್ಯಾದಿ ಹಗರಣಗಳನ್ನು ಮುಚ್ಚಿಹಾಕಲು, ಈ ಪ್ರಕರಣವನ್ನು ಮಾಡಿದ್ದಾರೆ. ಎಲ್ಲ ವರ್ಗದವರಿಗೆ ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಚ್.ಎಲ್. ರಮೇಶ್ ಮಾತನಾಡಿ ರಾಜ್ಯ ಸರ್ಕಾರ ವಿವಿಧ ಹಗರಣಗಳನ್ನು ಮುಚ್ಚಿ ಹಾಕಲು ಸರ್ವಾಧಿಕಾರ ಮಾಡುತ್ತಿದೆ. ಕೂಡಲೇ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು.

ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್ ಮಾತನಾಡಿ ರಾಷ್ಟ್ರೀಯ ನಾಯಕ ಸಿ.ಟಿ.ರವಿ ಅವರ ಶಕ್ತಿ ಕುಂಟಿತಗೊಳಿಸಲು ಈ ಪ್ರಕರಣವನ್ನು ಹುಟ್ಟುಹಾಕಿದೆ. ಇದನ್ನು ನಾವು ಸವಾಲಾಗಿ ತೆಗೆದುಕೊಳ್ಳುತ್ತೇವೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ ಮಾತನಾಡಿ ನಮ್ಮ ನಾಯಕರನ್ನು ಬಂಧಿಸಿರುವುದು, ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು. ಎಂ.ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಹಗರಣ ಮುಚ್ಚಿಹಾಕುವ ಯತ್ನ ನಡೆದಿದೆ ಎಂದರು.

ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ, ಟೈರ್ ಸುಟ್ಟು ಅಕ್ರೋಶ ವ್ಯಕ್ತಿಪಡಿಸಿದರು.ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಜಿಪಂ ಮಾಜಿ ಉಪಾಧ್ಯಕ್ಷ ಶಂಭೈನೂರು ಆನಂದಪ್ಪ ಇತರರಿದ್ದರು.

20ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸಿ.ಟಿ.ರವಿ ಬಂಧನ ಖಂಡಿಸಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ, ಮಾಜಿ ಶಾಸಕ ಡಿ.ಎಸ್.ಸುರೇಶ್, ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಟಿ.ಎಚ್.ಎಲ್. ರಮೇಶ್, ಕೆ.ಆರ್.ಆನಂದಪ್ಪ, ಎಂ.ಕೃಷ್ಣಮೂರ್ತಿ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.