ಸಾರಾಂಶ
ಕೃಷ್ಣಾ ತೀರದ ರೈತರ ಅನುಕೂಲಕ್ಕಾಗಿ ಶ್ರಮಿಸಿದ ಮಾಜಿ ಕೇಂದ್ರ ಸಚಿವ, ಶಾಸಕ ದಿ.ಸಿದ್ದು ನ್ಯಾಮಗೌಡರು ಈ ಭಾಗದ ರೈತರು ನೀರಾವರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಲಿ ಎಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬಳಿ ಬ್ಯಾರೇಜ್‌ನ್ನು ರೈತರ ಸಹಕಾರದಿಂದ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಕೃಷ್ಣಾ ತೀರದ ರೈತರ ಅನುಕೂಲಕ್ಕಾಗಿ ಶ್ರಮಿಸಿದ ಮಾಜಿ ಕೇಂದ್ರ ಸಚಿವ, ಶಾಸಕ ದಿ.ಸಿದ್ದು ನ್ಯಾಮಗೌಡರು ಈ ಭಾಗದ ರೈತರು ನೀರಾವರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಲಿ ಎಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬಳಿ ಬ್ಯಾರೇಜ್‌ನ್ನು ರೈತರ ಸಹಕಾರದಿಂದ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು. ತಾಲೂಕಿನ ನಾಗನೂರು ಬಳಿ ಇರುವ ಜಮಖಂಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ದಿ.ಸಿದ್ದು ನ್ಯಾಮಗೌಡರ ಜನ್ಮದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಚುನಾವಣೆಗಳಲ್ಲಿ ಸೋಲಿಸಿ, ಕೇಂದ್ರ ಸರ್ಕಾರದ ಕಲ್ಲಿದ್ದಲು ಖಾತೆಯ ಮಂತ್ರಿಗಳಾಗಿ, ನಂತರ ಶಾಸಕರಾಗಿ ಸೇವೆ ಸಲ್ಲಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಸರ್ಕಾರದ ಸಹಾಯ ಇಲ್ಲದೆ ಬ್ಯಾರೇಜ್ ಹಾಗೂ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿದ ಅವರು ಸದಾ ರೈತರ ಹಿತ ಚಿಂತಕರಾಗಿ, ರೈತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಚಿಕ್ಕಪಡಸಲಗಿ, ನಾಗನೂರು, ಹಿರೇಪಡಸಲಗಿ, ತೊದಲಬಾಗಿ, ಅಡಿಹುಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಭಾಗವಹಿಸಿದ್ದರು. ದ್ವಿತೀಯ ಪುತ್ರ ಬಸವರಾಜ ನ್ಯಾಮಗೌಡ, ಕಾಂಗ್ರೆಸ್ ಮುಖಂಡರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.