ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ

| Published : Sep 12 2025, 01:00 AM IST

ಸಾರಾಂಶ

ದಾಬಸ್‍ಪೇಟೆ: ಹೈನೋದ್ಯಮ ಗ್ರಾಮೀಣ ರೈತರ ಜೀವನಾಡಿ, ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‍ಪೇಟೆ: ಹೈನೋದ್ಯಮ ಗ್ರಾಮೀಣ ರೈತರ ಜೀವನಾಡಿ, ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು. ತ್ಯಾಮಗೊಂಡ್ಲು ಹೋಬಳಿಯ ಕೋಡಿಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಬಮೂಲ್ ಬೆಳವಣಿಗೆಗೆ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ನೂತನ ಪ್ರಯೋಗಗಳನ್ನು ಆರಂಭಿಸಿದ್ದಾರೆ. ಗುಣಮಟ್ಟದ ಹಾಲು ಉತ್ಪಾದನೆಯಿಂದ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ ಎಂದರು. ಬಮೂಲ್ ಮಾಜಿ ನಿರ್ದೇಶಕ ಭಾಸ್ಕರ್ ಮಾತನಾಡಿ, ಹೈನುಗಾರಿಕೆ ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿ ಸದಸ್ಯ ವಾಸುದೇವ್, ಗ್ರಾಪಂ ಉಪಾಧ್ಯಕ್ಷ ನರಸಿಂಹಮೂರ್ತಿ, ಸದಸ್ಯ ರಂಗೇಗೌಡ್ರು, ಮುಖಂಡರಾದ ಆಂಜನಮೂರ್ತಿ, ಗಂಗಪ್ಪ, ಧರಣೀಶ್, ರವಿಕುಮಾರ್, ಮಂಜುನಾಥ್, ಸಂಘದ ಕಾರ್ಯದರ್ಶಿ ವೀಣಾ, ಹಾಲು ಉತ್ಪಾದಕರು ಹಾಗೂ ಮಹಿಳೆ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪೋಟೋ 3 :

ತ್ಯಾಮಗೊಂಡ್ಲು ಹೋಬಳಿಯ ಕೋಡಿಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಎನ್.ಶ್ರೀನಿವಾಸ್ ಉದ್ಘಾಟಿಸಿದರು. ಬಮೂಲ್ ಮಾಜಿ ನಿರ್ದೇಶಕ ಭಾಸ್ಕರ್, ಬಗರ್ ಹುಕುಂ ಸಮಿತಿ ಸದಸ್ಯ ವಾಸುದೇವ್, ಗ್ರಾಪಂ ಉಪಾಧ್ಯಕ್ಷ ನರಸಿಂಹಮೂರ್ತಿ, ಸದಸ್ಯ ರಂಗೇಗೌಡ ಇತರರಿದ್ದರು.