ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 8ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’

| Published : Aug 31 2025, 02:00 AM IST

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 8ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’
Share this Article
  • FB
  • TW
  • Linkdin
  • Email

ಸಾರಾಂಶ

ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ.

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಸಹಕಾರ ರಂಗದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಸಾಧನೆಯ 94 ವರ್ಷಗಳ ಸಾರ್ಥಕ ಸೇವೆಯಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ಸತತ 8ನೇ ಬಾರಿಗೆ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’ ಲಭಿಸಿದೆ.

ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ. ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 2017-18 ,‌ 2018-19 , 2019-20 , 2020-21, 2021-22, 2022-23, 2023-24ನೇ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು. ಇದೀಗ 2024-25ನೇ ಸಾಲಿನಲ್ಲೂ ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಮುಡಿಗೇರಿಸಿಕೊಂಡಿದೆ.

ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ 111ನೇ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್ ಕೋಟ್ಯಾನ್ , ಎಂ.ವಾದಿರಾಜ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್. ಬಿ.ಜಯರಾಮ ರೈ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್.ಮನ್ಮಥ , ಕುಶಾಲಪ್ಪ ಗೌಡ , ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಭಯ ಜಿಲ್ಲೆಗಳ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್. ಹಾಗೂ ಲಾವಣ್ಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ನೌಕರರ ಸಹಕಾರ ಸಂಘದ ಉಪಾಧ್ಯಕ್ಷ ರಾಘವ ಆರ್.ಉಚ್ಚಿಲ್, ನಿರ್ದೇಶಕರಾದ ಜಯಪ್ರಕಾಶ್ ರೈ, ಕಿರಣ್ ಕುಮಾರ್ ಶೆಟ್ಟಿ, ಪ್ರೇಮ್ ರಾಜ್ ಭಂಡಾರಿ ಇದ್ದರು.