ಬೆಳ್ತಂಗಡಿ : ಪಿಕಪ್ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.
ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸ
ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಬಳಂಜ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಸಮೀಪದ ಫಾರ್ಮ್‌ಗೆ ಕರೆದುಕೊಂಡು ಹೋಗಲಾಗಿತ್ತು.
ವಿಡಿಯೋ ಸಹ ವೈರಲ್
ಅದರ ವಿಡಿಯೋ ಸಹ ವೈರಲ್ ಆಗಿತ್ತು. ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಪಡೆದು ಅದನ್ನು ಮಂಗಳೂರು ಡಿಡಿಪಿಐ ಶಶಿಧರ್.ಜಿ.ಎಸ್.ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
