ಶಿರಾಡಿ ಘಾಟ್‌ನಲ್ಲಿ ವಾರದಲ್ಲಿ 2ನೇ ಬಾರಿಗೆ ಕುಸಿದ ಗುಡ್ಡ - ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್

| Published : Aug 17 2024, 11:07 AM IST

Shiradi Ghat
ಶಿರಾಡಿ ಘಾಟ್‌ನಲ್ಲಿ ವಾರದಲ್ಲಿ 2ನೇ ಬಾರಿಗೆ ಕುಸಿದ ಗುಡ್ಡ - ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್‌ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.

ಸಕಲೇಶಪುರ :  ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್‌ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.

ವಾರದ ಹಿಂದೆ ಭೂಕುಸಿತ ಸಂಭವಿಸಿದ ಪ್ರದೇಶವ್ಯಾಪ್ತಿಯಲ್ಲೇ ಮತ್ತೆ ಹಳಿಗಳ ಮೇಲೆ ಗುಡ್ಡ ಕುಸಿದಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲನ್ನು ಬಾಳ್ಳುಪೇಟೆ ಬಳಿ, ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರವಾರ ಎಕ್ಸ್‌ಪ್ರೆಸ್ ರೈಲನ್ನು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಪ್ರಯಾಣಿಕರನ್ನು ಬಸ್‌ಗಳ ಮೂಲಕ ನಿಗದಿತ ಸ್ಥಳಗಳಿಗೆ ಕಳುಹಿಸಿಕೊಡಲಾಗಿದೆ.

ಗುಡ್ಡ ಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಯಾಚರಣೆ ಇನ್ನೂ ಎರಡು ದಿನಗಳ ಕಾಲ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಭೂಕುಸಿತ ಸಂಭವಿಸಿರುವ ಪ್ರದೇಶದಲ್ಲಿ ಅಂತರ್ಜಲ ಉಕ್ಕುತ್ತಿರುವುದರಿಂದ ಮತ್ತಷ್ಟು ಭೂಕುಸಿತದ ಭಯ ಕಾಡುತ್ತಿದೆ. ಇದರಿಂದಾಗಿ ಅನಿರ್ದಿಷ್ಟಾವಧಿಯವರೆಗೆ ಈ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

ಆಚಂಗಿಯಲ್ಲಿ ಗುಡ್ಡ ಕುಸಿದ ಪರಿಣಾಮ ಆ.11ರಿಂದ 14ರವರೆಗೆ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಬಂದ್‌ ಆಗಿತ್ತು. ಸಂಚಾರ ಆರಂಭಿಸಿದ ಒಂದು ದಿನದಲ್ಲೆ ಮತ್ತೆ ಭೂಕುಸಿತದಿಂದ ಸಂಚಾರ ತಡೆಹಿಡಿಯಲಾಗಿದೆ.