ಸಾರಾಂಶ
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಭಾನುವಾರವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿಲ್ಲ.
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಭಾನುವಾರವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ತಿಮರೋಡಿ ಮನೆಗೆ ತೆರಳಿದ ಪೊಲೀಸರು, 2ನೇ ಬಾರಿ ನೋಟಿಸ್ ಅಂಟಿಸಿದ್ದಾರೆ. ಸೆ.25 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ತಲೆಬುರುಡೆ ಪತ್ತೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ತಿಮರೋಡಿ ಮನೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಜರಿಗೆ ತೆರಳಿದ ವೇಳೆ ಅಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವುದು ಪತ್ತೆಯಾಗಿತ್ತು. ಅದನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು, ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಶಸ್ತ್ರಾಸ್ತ್ರ ಕಾಯ್ದೆಯಡಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಕೇಸು ದಾಖಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಲು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿದ್ದ ವೇಳೆ ಅವರು ನಾಪತ್ತೆಯಾಗಿದ್ದರು. ಹೀಗಾಗಿ, ಅವರ ಮನೆಯ ಗೋಡೆಗೆ ಪೊಲೀಸರು ನೋಟಿಸ್ ಅಂಟಿಸಿ, ಸೆ.21ರಂದು ಠಾಣೆಗೆ ಪರವಾನಿಗೆ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆಗ ನಾಪತ್ತೆಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಭಾನುವಾರವೂ ವಿಚಾರಣೆಗೆ ಹಾಜರಾಗಿಲ್ಲ.
- 2ನೇ ಬಾರಿ ನೋಟಿಸ್ ಜಾರಿ
- ಸೆ.25ರಂದು ವಿಚಾರಣೆಗೆ ಹಾಜರಾಗಲು ಸೂಚನೆ