ಸಹಕಾರಿ ಬ್ಯಾಂಕ್‌ಗಳಿಗೆ ಸರ್ಕಾರಿ ಸಾಲ, ಸವಲತ್ತು ನೀಡಲು ಅವಕಾಶ ಇರಲಿ: ಡಾ.ಎಂ.ಎನ್.ಆರ್.ಮಹತ್ವಕಾಂಕ್ಷೆಯ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಸಲುವಾಗಿ ಸ್ವಸಹಾಯ ಗುಂಪುಗಳು, ಮಹಿಳಾ ಸ್ವಾವಲಂಬನೆ, ಬಡಜನರಿಗೆ ಸಾಲ ಸೌಲಭ್ಯಗಳ ಸರಳಿಕರಣ, ಸ್ವಸಹಾಯ ಸಂಘಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಿರಿಯ ಸಹಕಾರಿ ಧುರೀಣ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಕರ್ತರೊಂದಿಗೆ ಸಂವಾದ ಸಭೆಯನ್ನು ಶನಿವಾರ ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಸಿದರು.