ಮಂಗಳೂರಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಸ್ಪರ್ಧೆ: ಗುಂಡೂರಾವ್ಗಾಳಿಪಟ ಉತ್ಸವದಲ್ಲಿ ಗ್ರೀಸ್, ಯುಕೆ, ಜರ್ಮನಿ, ಇಂಡೋನೇಷ್ಯಾ, ನೆದರ್ ಲ್ಯಾಂಡ್, ಎಸ್ಟಿನೋವಾ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದ ನುರಿತ ಗಾಳಿಪಟ ಹಾರಾಟಗಾರರು ಪಾಲ್ಗೊಂಡಿದ್ದಾರೆ. ಅಲ್ಲದೆ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದಲೂ ಕಲಾವಿದರು ಗಾಳಿಪಟ ಹಾರಿಸಲು ಬಂದಿದ್ದಾರೆ. ಭಾರೀ ಗಾತ್ರದ ಗಾಳಿಪಟಗಳು, ವಿವಿಧ ಪ್ರಾಣಿಗಳ ಆಕಾರದೊಂದಿಗೆ ಮನ ಸೆಳೆಯುತ್ತಿವೆ.