ಕುಕ್ಕೆ ಸುಬ್ರಹ್ಮಣ್ಯ: ಜ.2ರಿಂದ ಕಿರುಷಷ್ಠಿ ಸಾಂಸ್ಕೃತಿಕ ವೈಭವ, ರಥೋತ್ಸವಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.೨ ರಿಂದ ೫ ರ ತನಕ ಕಿರುಷಷ್ಠಿ ಮಹೋತ್ಸವ, ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಜ.೫ರಂದು ಸಂಜೆ ೬.೩೦ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಮತ್ತು ಕುಕ್ಕೆ ಬೆಡಿ ನೆರವೇರಲಿದೆ.