ಕುದುರೆಮುಖ: ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಸಮೀಕ್ಷೆ ಆರಂಭತಾಲೂಕಿನ ನಾರಾವಿ, ಕುತ್ಲೂರು, ಸುಲ್ಕೇರಿಮೊಗ್ರು, ನಾವರ, ಸವಣಾಲು, ನಾವೂರು, ಮಲವಂತಿಗೆ ಗ್ರಾಮಗಳಲ್ಲಿರುವ ಆದಿವಾಸಿ ಮಲೆಕುಡಿಯ ಕುಟುಂಬಗಳು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿ ಸುಮಾರು 140 ಮನೆಗಳು ಇನ್ನು ಕತ್ತಲಿನಲ್ಲಿ ಕಾಲ ಕಳೆಯುತ್ತಿವೆ. ಇಲ್ಲಿಗೆ ವಿದ್ಯುತ್ ಸಂಪರ್ಕದ ಕುರಿತು ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಕೊನೆಗೂ ಕನಸು ನನಸಾಗುವ ದಿನಗಳು ಹತ್ತಿರವಾದಂತೆ ಕಾಣುತ್ತಿದೆ.