ಕುಕ್ಕೆಗೆ ಕತ್ರಿನಾ ಕೈಫ್: ಸಂತಾನಪ್ರಾಪ್ತಿಗೆ ಸರ್ಪಸಂಸ್ಕಾರ ಸೇವೆಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಸ್ನೇಹಿತರೊಂದಿಗೆ ಮಂಗಳವಾರ ಆಗಮಿಸಿದರು. ಅವರು, ಸರ್ಪ ಸಂಸ್ಕಾರ ಸೇವೆ ಹಾಗೂ ನಾಗಪ್ರತಿಷ್ಠೆ ಪೂಜೆಗಳಲ್ಲಿ ಭಾಗಿಯಾಗಲಿದ್ದಾರೆ. ಸಂತಾನ ಪ್ರಾಪ್ತಿ, ವೃತ್ತಿ ಜೀವನದ ಅಭಿವೃದ್ಧಿ ಸೇರಿದಂತೆ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಸಂಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.