ಧರ್ಮಸ್ಥಳ ಲಕ್ಷದೀಪೋತ್ಸವ: ವೈಭವದ ಲಲಿತೋದ್ಯಾನ ಉತ್ಸವಸ್ವಾಮಿಯನ್ನು ದೇವಾಲಯದೊಳಗೆ ಕೊಂಡೊಯ್ಯುವಲ್ಲಿಗೆ ಲಲಿತೋದ್ಯಾನ ಉತ್ಸವ ಸಂಪನ್ನವಾಯಿತು. ದೇವಾಲಯದ ಆನೆಗಳಾದ ಲಕ್ಷ್ಮೀ, ಶಿವಾನಿ ಮತ್ತು ಬಸವ ಭೀಷ್ಮ ಮೆರವಣಿಗೆ ಮುಂಭಾಗದಲ್ಲಿ ಹೆಜ್ಜೆ ಹಾಕಿ ಉತ್ಸವದ ಕಳೆ ಹೆಚ್ಚಿಸಿದವು. ನೆರೆದಿದ್ದ ಸಾವಿರಾರು ಭಕ್ತರು ಉತ್ಸವವನ್ನು ಕಣ್ತುಂಬಿಕೊಂಡರು.