ಕುಕ್ಕೆ ಚಂಪಾಷಷ್ಠಿ ಮಹೋತ್ಸವದಲ್ಲಿ ಭಕ್ತರ ಸುರಕ್ಷತೆ, ಮೂಲಸೌಲಭ್ಯಕ್ಕೆ ಆದ್ಯತೆಬೀದಿ ಉರುಳು ಸೇವೆ ಮಾಡುವ ಬೀದಿಯನ್ನು ನೀರು ಹಾಕಿ ಸ್ವಚ್ಛಗೊಳಿಸಿ ಅವರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಬೀದಿ ಉರುಳು ಸೇವೆ ಮಾಡುವ ಭಕ್ತರಿಗೆ ಸಂಜೆ ೭ಗಂಟೆಯಿಂದ ಮುಂಜಾನೆ ೭ಗಂಟೆವರೆಗೆ ಅವಕಾಶ ಮಾಡಿಕೊಡಲಾಗಿದೆ. ಮಹೋತ್ಸವದ ಸಂಬಂಧ ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳು ಸ್ವಇಚ್ಛೆಯಿಂದ ನಡೆಸುತ್ತಿರುವ ಎಡೆಸ್ನಾನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.