ದಾರಂದಕುಕ್ಕು ಬಸ್ ತಂಗುದಾಣ ವಿವಾದ: ಎಸಿ ನೇತೃತ್ವದಲ್ಲಿ ಅಧಿಕಾರಿಗಳ ಪರಿಶೀಲನೆಪರಿಶೀಲನೆ ನಡೆಸಿದ ಸಹಾಯಕ ಆಯುಕ್ತರು, ಪ್ರಯಾಣಿಕರ ತಂಗುದಾಣದ ಬಗ್ಗೆ ಸರ್ಕಾರಕ್ಕೆ ಸಾರ್ವಜನಿಕ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ದೂರಿನ ಬಗ್ಗೆ ಮಾಹಿತಿ ಪಡೆಯಲು ಸ್ಥಳ ತನಿಖೆ ನಡೆಸಲಾಗುತ್ತಿದೆ. ತಂಗುದಾಣವನ್ನು ತೆರವುಗೊಳಿಸುವುದಿಲ್ಲ. ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.