ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಮನವಿಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.