ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಕರಾವಳಿಅಭಿವೃದ್ಧಿಗಾಗಿ ಕೆ-ಶೋರ್ ಜಾರಿಯೋಜನೆ ಅಡಿಯಲ್ಲಿ ಅರಬ್ಬಿ ಸಮುದ್ರಕ್ಕೆ ನದಿಗಳು ಸೇರ್ಪಡೆಯಾಗುವ ಪ್ರದೇಶ, ಸಮುದ್ರ ತೀರ ಹಾಗೂ ಇನ್ನಿತರ ಕಡೆಗಳಲ್ಲಿ ಮ್ಯಾಂಗ್ರೋವ್, ಬಿದಿರು ಸೇರಿದಂತೆ ಇನ್ನಿತರ ಸಸಿಗಳನ್ನು ನೆಡಲಾಗುತ್ತದೆ. ಅದರ ಜತೆಗೆ ಕ್ಲವರ್ಟ್‌ಗಳು, ಚೆಕ್‌ಡ್ಯಾಂ, ಕ್ಯಾಸ್‌ವೇಗಳನ್ನು ನಿರ್ಮಿಸಿ ಕಡಲ ಕೊರೆತ ಸೇರಿದಂತೆ ಸಮುದ್ರ ಮತ್ತು ಅದರ ತೀರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ.