‘ಕಾಂತಾರ 1’ ಸಿನಿಮಾ ಬಿಡುಗಡೆ ದಿನಾಂಕ ಶೀಘ್ರ ಪ್ರಕಟ: ರಿಷಬ್ ಶೆಟ್ಟಿ‘ಕಾಂತಾರ 1’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ, ಆದಷ್ಟು ಬೇಗ ನಿರ್ಮಾಪಕರು ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಲಭಿಸಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ದೆಹಲಿಯಲ್ಲಿ ಸ್ವೀಕರಿಸಿದ ರಿಷಬ್ ಶೆಟ್ಟಿ ಬುಧವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸುದ್ದಿಗಾರರಲ್ಲಿ ಮಾತನಾಡಿದರು.