ಮಹಾಲಯ ಅಮವಾಸ್ಯೆ: ಉಪ್ಪಿನಂಗಡಿಯಲ್ಲಿ ಪಿಂಡ ಪ್ರದಾನ ಕಾರ್ಯಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಾಪಾತ್ರ ಅವರು ಮುಂಜಾನೆಯೇ ದೇವಳಕ್ಕೆ ಆಗಮಿಸಿ, ತಮ್ಮ ಗತಿಸಿದ ಹಿರಿಯರಿಗೆ ಸದ್ಗತಿ ಬಯಸಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಉಳಿದಂತೆ ರಾಜ್ಯ , ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು.