ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳ ವೆಬ್ ಸೈಟ್ ಲೋಕಾರ್ಪಣೆ900 ವರ್ಷಗಳ ಇತಿಹಾಸ ಇರುವ, ಮುಜರಾಯಿ ಇಲಾಖೆಯ ಎ ಗ್ರೇಡ್ ದೇವಾಲಯವಾಗಿರುವ ಅದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಮಾರ್ಚ್ 16ರಂದು ಬ್ರಹ್ಮಕಲಶಾಭಿಷೇಕ ಸಂಪನ್ನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕ್ಷೇತ್ರದ ವೆಬ್‌ಸೈಟ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಅಕೌಂಟ್‌ಗಳನ್ನು ಗುರುವಾರ ಅನಾವರಣಗೊಳಿಸಲಾಯಿತು.