ಅತೀ ಹೆಚ್ಚು ತೆರಿಗೆ ಸಂಗ್ರಹ: ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಮೈಸೂರಿನಲ್ಲಿ ತರಬೇತಿಗೆ ಆಯ್ಕೆತರಬೇತಿಯು ಜು. 21 ರಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ವಸತಿ ನಿಲಯ ಮೈಸೂರುನಲ್ಲಿ ನಡೆಯಲಿದ್ದು ತರಬೇತಿಯಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಶಿಕಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಜಾ, ಕಾರ್ಯದರ್ಶಿ ಮಂಜುನಾಥ ಭಾಗವಹಿಸಲಿದ್ದಾರೆ. ಮೂಲ್ಕಿ ತಾಲೂಕಿನಿಂದ ಕೆಮ್ರಾಲ್ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಗಳನ್ನು 2024-25ನೇ ಸಾಲಿನ ತೆರಿಗೆ ಸಂಗ್ರಹಣಾ ವರದಿಯಂತೆ ಆಯ್ಕೆ ಮಾಡಲಾಗಿದೆ.