ಮಂಗಳೂರು: ಪಾಳು ಬಿದ್ದ ‘ಸ್ಮಾರ್ಟ್’ ಮಾರುಕಟ್ಟೆಗಳು!ಸ್ಮಾರ್ಟ್ ಸಿಟಿಯ ಪರಿಕಲ್ಪನೆಗೆ ಪೂರಕವಾಗಿ ಮಂಗಳೂರು ನಗರದಲ್ಲಿ ಮೂರು ಬಹುಮಹಡಿ ಮಾರುಕಟ್ಟೆ ಕಟ್ಟಡಗಳನ್ನು ನಿರ್ಮಾಣ ಮಾಡಿ ವರ್ಷಗಳು ಕಳೆದರೂ ಇನ್ನೂ ಪಾಳುಬಿದ್ದ ಸ್ಥಿತಿಯಲ್ಲಿದ್ದು, ಆಡಳಿತದ ಬೇಜವಾಬ್ದಾರಿಗೆ ಕೈಗನ್ನಡಿಯಾಗಿದೆ. ಕೋಟ್ಯಂತರ ರು. ಖರ್ಚು ಮಾಡಿ ಕಟ್ಟಿದ ಕಟ್ಟಡಗಳು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.