ಯಕ್ಷರಂಗದ ‘ದೈತ್ಯ ಪ್ರತಿಭೆ’ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲರಾವಣ, ಮಹಿರಾವಣ, ಮಹಿಷಾಸುರ, ಶುಂಭ, ಕುಂಭಕರ್ಣ, ಶೂರ್ಪನಖಿ, ಪೂತನಿ, ಅಜಮುಖಿ, ಕಾಕಾಸುರ, ತಾರಕಾಸುರ, ಯಮಧರ್ಮ ಸಹಿತ ಎಲ್ಲ ರೀತಿಯ ಪುರುಷ ಹಾಗೂ ಹೆಣ್ಣು ಬಣ್ಣದ ವೇಷಗಳಲ್ಲಿ ಸಿದ್ದಕಟ್ಟೆಯವರು ಹೆಸರು ಮಾಡಿದವರು. ಸುಸ್ಪಷ್ಟ ಮಾತುಗಾರಿಕೆ, ಪರಂಪರೆಯ ಬಣ್ಣ, ಬಣ್ಣದ ವೇಷಕ್ಕೆ ಹೇಳಿ ಮಾಡಿಸಿದ ಅಂಗ ಸೌಷ್ಟವ, ಗಡಸು ಧ್ವನಿ ಹಾಗೂ ಪ್ರಸಿದ್ಧ ಬಣ್ಣದ ವೇಷಧಾರಿ ಬಣ್ಣದ ಮಾಲಿಂಗರಿಂದ ಕಲಿತ ವಿದ್ಯೆ ಅವರನ್ನು ಅಗ್ರಗಣ್ಯ ವೇಷಧಾರಿಯನ್ನಾಗಿ ರೂಪಿಸಿತು.