ಮಂಗಳೂರು: ಮಡಿವಾಳ ಮಾಚಿದೇವ ಜಯಂತಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಮಾತನಾಡಿ, ವಚನಗಳನ್ನು ನಾಶ ಮಾಡುವ ಕ್ರಾಂತಿ ನಡೆದಾಗ ಅವುಗಳನ್ನು ಎದುರಿಸಿ ವಚನಗಳನ್ನು ಉಳಿಸಿದಂತಹ ಶಕ್ತಿವಂತ, ಧೀರತ್ವದ ವ್ಯಕ್ತಿ ಮಡಿವಾಳ ಮಾಚಿದೇವ. ಅವರ ತತ್ವಗಳನ್ನು, ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.