ಕುಂತೂರು ಶಾಲಾ ಕಟ್ಟಡ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂತೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಗೋಡೆ ಛಾವಣಿ ಸಮೇತ ಧರೆಗುರುಳಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಫಾತಿಮತ್ ಸುಹಾನ, ರಶ್ಮಿ, ದೀಕ್ಷಿತ, ಯಶ್ಮಿತಾ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.