ಮಂಗಳೂರಿನಲ್ಲಿ ಒಂದು ಕಾಲೇಜು ವಿದ್ಯಾರ್ಥಿಗಳಿಂದ ಇನ್ನೊಂದು ಕಾಲೇಜಿವರ ಕಿಡ್ನಾಪ್, ಹಲ್ಲೆ!ಫುಟ್ಬಾಲ್ ಪಂದ್ಯದ ವೇಳೆ ನಡೆದ ಸಣ್ಣ ಜಗಳವನ್ನೇ ಮುಂದಿಟ್ಟುಕೊಂಡು ಒಂದು ಕಾಲೇಜಿನ ವಿದ್ಯಾರ್ಥಿಗಳ ತಂಡ ಇನ್ನೊಂದು ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ, ಅರೆಬೆತ್ತಲೆಗೊಳಿಸಿ ವಿಡಿಯೋ ಮಾಡಿದ ಆಘಾತಕಾರಿ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಮಂಗಳವಾರ ಇಬ್ಬರನ್ನು ಬಂಧಿಸಲಾಗಿದೆ.