ಐವನ್ ಡಿಸೋಜ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಆಗ್ರಹಕಾಂಗ್ರೆಸ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಸಂಜೆ ಮನವಿ ಸಲ್ಲಿಸಿದೆ.