ಪೌರಕಾರ್ಮಿಕರಿಗೆ 5 ಲಕ್ಷ ರು. ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆಈಗಾಗಲೇ ಮಹಾನಗರ ಪಾಲಿಕೆಯ ನಿಧಿಯಿಂದ 708 ಮಂದಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ 3 ಲಕ್ಷ ರು. ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತ ಕಡಿಮೆಯಾಗಿದ್ದು, ಗಂಭೀರ ಕಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು 5 ಲಕ್ಷ ರು.ಗೆ ಏರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.