ಪ್ರಥಮ ‘ಕರ್ನಾಟಕ ಕ್ರೀಡಾಕೂಟ’ಕ್ಕೆ 5 ಕೋಟಿ ರು. ಬಿಡುಗಡೆ: ಡಿಸಿ ಮುಲ್ಲೈ ಮುಗಿಲನ್ಜ.17ರಂದು ಸಂಜೆ 4 ಗಂಟೆಗೆ ಸಂತ ಅಲೋಶಿಯ್ ಕಾಲೇಜು ಮೈದಾನದಿಂದ ಮಂಗಳಾ ಕ್ರೀಡಾಂಗಣದವರೆಗೆ ಕರಾವಳಿಯ ಕಲೆ, ಕ್ರೀಡೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ 20 ಕಲಾ ತಂಡಗಳ ಮೆರವಣಿಗೆ ಆಯೋಜಿಸಲಾಗಿದೆ. ಉದ್ಘಾಟನಾ ಸಮಾರಂಭದ ಬಳಿಕ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.