ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.