ಧರ್ಮಸ್ಥಳ ವಿರೋಧಿ ಬುರುಡೆ ಟೀಂ ಲೀಡರ್ ತಿಮರೋಡಿ ಗಡೀಪಾರುಕಾನೂನುಗಳ ಉಲ್ಲಂಘನೆ, ಅಶಾಂತಿ ಸೃಷ್ಟಿ, ಸಮಾಜದಲ್ಲಿ ಅಸ್ಥಿರತೆ ಉಂಟು ಮಾಡುವ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಶಸ್ತ್ರಾಸ್ತ್ರ ಹೊಂದಿರುವುದು ಸೇರಿ ಸುಮಾರು 32 ಪ್ರಕರಣಗಳನ್ನು ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ತಿಮರೋಡಿ ನಾಪತ್ತೆಯಾಗಿದ್ದಾರೆ.