ಬಡವರಿಗೆ ದಾನದಿಂದ ಸಂತೃಪ್ತ: ಉದ್ಯಮಿ ಕನ್ಯಾನ ಸದಾಶಿವ ಕೆ. ಶೆಟ್ಟಿವೇದಿಕೆಯಲ್ಲಿದ್ದ ಅತಿಥಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸದಾಶಿವ ಶೆಟ್ಟಿ ಅವರಿಗೆ ಅರ್ಪಿಸಿ, ಗೌರವ ಸಲ್ಲಿಸಿದರು. ಈ ಸಂದರ್ಭ ಸೌಮ್ಯಾ ಅವರ ಹಾಡಿನೊಂದಿಗೆ ಮಂಜುಶ್ರೀ ಚಂದ್ರಹಾಸ್ ಶೆಟ್ಟಿ ಅವರು ಆರತಿ ಬೆಳಗಿದರು. ಬಳಿಕ ಸತೀಶ್ ಶೆಟ್ಟಿ ಪಟ್ಲ ಅಭಿನಂದನಾ ಗೀತೆಯ ಮೂಲಕ ಗೌರವ ಸಲ್ಲಿಸಿದರು. ಬೃಹತ್ ಗಾತ್ರದ ಹೂವಿನ ಹಾರ ಹಾಗೂ ಆಪಲ್ ಹಾರ ಹಾಕಿ ಗೌರವಿಸಲಾಯಿತು.