ಮಂಗಳೂರು ಜೈಲಲ್ಲಿ ಕೈದಿಗಳ ರೌಡಿಸಂ ಬಯಲು: ಹಣಕ್ಕಾಗಿ ಸಹ ಕೈದಿಗೆ ಥಳಿತ!ವಿಚಾರಣಾಧೀನ ಕೈದಿ- ಉಳ್ಳಾಲದ ಮಿಥುನ್ ಎಂಬವರು ಮಂಗಳೂರು ಜೈಲಿನಲ್ಲಿ ಸಹ ಕೈದಿಗಳಿಂದಲೇ ಹಲ್ಲೆಗೀಡಾಗಿ ಹಣ ಕಳೆದುಕೊಂಡಿದ್ದಾರೆ. ಆರೋಪಿ ಸಹ ಕೈದಿಗಳಾದ ಧನುಷ ಭಂಡಾರಿ, ಸಚಿನ್ ತಲಪಾಡಿ, ದೀಲೇಶ ಬೆಲ್ಚಾಡ ಮತ್ತು ಲಾಯಿ ವೇಗಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.