ಸರ್ಕಾರಿ ಹಿಡಿತದಿಂದ ದೇವಾಲಯ ಮುಕ್ತಗೊಳ್ಳಲಿ: ಪೇಜಾವರಶ್ರೀದೇವಸ್ಥಾನಗಳಿಗೆ ಸ್ವಾಯತ್ತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ವಾಯತ್ತೆ ಸಿಕ್ಕಿದರೆ ಮಾತ್ರ ದೇವಾಲಯಗಳಿಗೆ ಭಕ್ತರು ನೀಡುವ ಸಂಪತ್ತು ನೇರವಾಗಿ ಭಕ್ತರ(ಸಮಾಜ) ವಿನಿಯೋಗಕ್ಕೆ ಸಾಧ್ಯವಾಗುತ್ತದೆ. ಆಗ ದೇವಸ್ಥಾನಗಳಿಂದ ಶಿಕ್ಷಣ, ವೈದಿಕ ಸಂಸ್ಥೆಗಳನ್ನು ಸ್ಥಾಪಿಸಬಹುದು ಎಂದು ಪೇಜಾವರ ಸ್ವಾಮೀಜಿ ಹೇಳಿದರು.