ಕಾಂತರಾಜ್ ಆಯೋಗ ವರದಿ ಅವೈಜ್ಞಾನಿಕ: ಹೇಮನಾಥ ಶೆಟ್ಟಿರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನೀಡಿದ ಪತ್ರಿಕಾ ಪ್ರಕಟನೆಯಲ್ಲಿ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಆಯೋಗವು ಪ್ರಕಟಿಸಿದ ಪಟ್ಟಿಯಲ್ಲಿ ಬಂಟ ಮತ್ತು ನಾಡವ ಜಾತಿಯನ್ನು ಬೇರೆ ಬೇರೆ ಜಾತಿಯಾಗಿ ತೋರಿಸಿದ್ದಾರೆ. ಇವೆರಡು ಬೇರೆ ಬೇರೆಯಲ್ಲ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ ತಿಳಿಸಿದ್ದಾರೆ.