ಸಂಚಾರ ನಿಯಮ ಉಲ್ಲಂಘನೆ: 105 ಕೇಸ್, ₹52500 ದಂಡಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಪೊಲೀಸರಿಂದ ಶನಿವಾರವೂ ವಿಶೇಷ ಕಾರ್ಯಾಚರಣೆ ಮುಂದುವರಿಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಎಎಸ್‌ಪಿಗಳಾದ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ಡಿವೈಎಸ್‌ಪಿ ಮಲ್ಲೇಶ ದೊಡ್ಮನಿ ಮಾರ್ಗದರ್ಶನದಲ್ಲಿ ಸಂಚಾರ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ ನೆಲವಾಗಲು ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.