ನೆರೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧನ ರಕ್ಷಿಸಿದ ಯುವಕರುಸೇತುವೆಯಿಂದ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ವೃದ್ಧರನ್ನು ಯುವಕರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಭಾನುವಾರ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಉಮ್ಮರ್ ಅಪಾಯದಿಂದ ಪಾರಾದ ವ್ಯಕ್ತಿ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು.