ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.೨೮ ಮತ್ತು ೨೯ ರಂದು ನಡೆಯಲಿರುವ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.