ಸೇವಾಭಾರತಿ ಸಮಾಜ ಸೇವೆ ಕಾರ್ಯ ಎಲ್ಲರಿಗೂ ಮಾದರಿ: ತಿಪ್ಪೇಸ್ವಾಮಿಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕೊಕ್ಕಡದಲ್ಲಿರುವ ಪುನಶ್ಚೇತನ ಕೇಂದ್ರ ರಾಜ್ಯಕ್ಕೇ ಮಾದರಿಯಾಗಿದೆ. ಇದೀಗ ವಿಸ್ತರಿತ ಸೇವೆಗಾಗಿ ಸೇವಾಭಾರತಿಯ 20ನೇ ವರ್ಷದ ಸಂಭ್ರಮದಲ್ಲಿ ಎರಡು ಮಹತ್ವದ ಕಾರ್ಯಗಳನ್ನು ಆಯೋಜಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಒತ್ತಡಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದೆ.