ಬಿತ್ತನೆ ಬೀಜ ದರ ಭಾರಿ ಏರಿಕೆ: ರೈತರಿಗೆ ಶಾಕ್!ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ. ಆದರೆ, ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ!