ಸ್ವ ಉದ್ಯೋಗದಿಂದ ಸ್ವಾವಲಂಬಿ ಬದುಕು: ಡಾ. ವೀರೇಂದ್ರ ಹೆಗ್ಗಡೆಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಇತ್ತೀಚೆಗೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.