ಕೆಟ್ಟ ಸಂಪ್ರದಾಯ ಹುಟ್ಟು ಹಾಕಲು ಸಿದ್ಧನಿಲ್ಲ: ಯು.ಟಿ. ಖಾದರ್ಮೈಸೂರಿನ ಮೂಡಾ ಹಗರಣ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ವಾದ-ಪ್ರತಿವಾದ ಆಲಿಸಿಯೇ ರೂಲಿಂಗ್ ನೀಡಿದ್ದೇನೆ. ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದಕ್ಕೆ ನಾನು ಸಿದ್ಧನಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.